ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತ್ಯಕ್ಷ: ನಡೆ ನಿಗೂಢ

ಬುಧವಾರ, 2 ಜನವರಿ 2019 (16:47 IST)
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಸಂಪುಟದಿಂದ ಕೈ ಬಿಟ್ಟ ಹಿನ್ನೆಲೆಯಲ್ಲಿ ಯಾರ ಸಂಪರ್ಕಕ್ಕೂ ಸಿಗದಂತೆ ಇದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರತ್ಯಕ್ಷವಾಗಿದ್ದಾರೆ.

ಮೈತ್ರಿ ಸರಕಾರಕ್ಕೆ ನಡುಕ ಹುಟ್ಟಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ನಿವಾಸದಲ್ಲಿ ಗೊಕಾಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಕಳೆದ ಎರಡು ವಾರಗಳಿಂದ ಯಾರ ಕೈಗೂ ಸಿಗದೆ ಇದ್ದ ರಮೇಶ್ ಜಾರಕಿಹೊಳಿ ತಡರಾತ್ರಿ ಗೋಕಾಕ್ ನಿವಾಸಕ್ಕೆ ಆಗಮಿಸಿದ್ದಾರೆ.  ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ನಿವಾಸದಿಂದ ಹೊರಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷದ ಪ್ರಮುಖರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲವು ನಾಯಕರು, ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಲು ಯತ್ನಿಸಿದ್ದರು. ಆದರೆ ಪ್ರಯತ್ನ ಕೈಗೂಡಿರಲಿಲ್ಲ. ಯಾರ ಸಂಪರ್ಕಕ್ಕೂ ಸಿಗದೆ ಇದ್ದವರು ಈಗ ಕಾಣಿಸಿಕೊಂಡಿರುವುದು ಅವರ ಮುಂದಿನ ನಡೆ ಬಗ್ಗೆ ಕುತೂಹಲ ಮೂಡುವಂತೆ ಮಾಡಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ