ತುಮಕೂರು : ಸಂಸದ ಡಿ.ಕೆ ಸುರೇಶ್ ಅವರು ದಕ್ಷಿಣದ ಹಣವನ್ನ ಬಳಸಿಕೊಂಡು ಉತ್ತರದವರಿಗೆ ಕೊಡುತ್ತಾರೆ ಎನ್ನುವ ಮೂಲಕ ದೇಶ ಒಡೆಯುವ ಮಾತನಾಡಿದ್ದಾರೆ. ಮಾಧ್ಯಮದಲ್ಲಿ, ಸಾರ್ವಜನಿಕವಾಗಿ ಇಡೀ ದೇಶದಲ್ಲಿ ಇದಕ್ಕೆ ಖಂಡನೆ ವ್ಯಕ್ತವಾಗಿದೆ. ರಾಜ್ಯಸಭೆ, ಲೋಕಸಭೆಯಲ್ಲಿ ಕೂಡ ಕಾಂಗ್ರೆಸ್ ಗೆ ಮುಜುಗರವಾಗಿದೆ ಎಂದು ನುಡಿದ ರೇಣುಕಾಚಾರ್ಯ, ಮತ್ತೊಂದು ಕಡೆ ಬಾಲಕೃಷ್ಣ ಅವರು ಮಂತ್ರಾಕ್ಷತೆ ಕೊಟ್ಟು ವೋಟ್ ಕೇಳ್ತಿದ್ದಾರೆ ಎಂದಿದ್ದಾರೆ. ಇದೆಲ್ಲ ಮುಜುಗರವನ್ನ ವಿಷಯಾಂತರಕ್ಕೆ ದೆಹಲಿಗೆ ಪ್ರತಿಭಟನೆ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು 9 ತಿಂಗಳು ಕಳೆದರೂ ಸರ್ಕಾರ ಬದುಕಿದೆಯೇ ಸತ್ತಿದೆಯೇ ಎಂದು ಗೊತ್ತಾಗುತ್ತಿಲ್ಲ ಎಂದು ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ಇನ್ನೂ ಫೆ. 7 ರಂದು ದೆಹಲಿಯಲ್ಲಿ ಕಾಂಗ್ರೆಸ್ ಮಾಡಲು ಹೊರಟಿರುವ ಪ್ರತಿಭಟನೆ ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಭಾನುವಾರ ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಕೆಶಿ ಅವರಿಗೆ ಮಾಧ್ಯಮದ ಮುಖಾಂತರ ಬಹಿರಂಗ ಸವಾಲು ಹಾಕುತ್ತೇನೆ. ಮನಮಹೋನ್ ಸಿಂಗ್ 10 ವರ್ಷ ಪ್ರಧಾನಿಯಾಗಿದ್ದಾಗ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. ಮೋದಿ ಪ್ರಧಾನಿ ಆದ ಮೇಲೆ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದರು.