ಬಿಜೆಪಿ ನಾಯಕರಿಗೆ ಬುದ್ಧಿಭ್ರಮಣೆಯಾದಂತೆ ತೋರುತ್ತಿದೆ. ತಮ್ಮ ಪಕ್ಷದ ಭ್ರಷ್ಟಾಚಾರವನ್ನು ಪ್ರತಿಪಕ್ಷಗಳ ಮೇಲೆ ಹೊರಿಸಿ ತಮ್ಮ ಭ್ರಷ್ಟಾಚಾರವನ್ನು ಮರೆ ಮಾಚುವ ಕುತಂತ್ರದ ಬಗ್ಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಿರುದ್ಯೋಗಿ ನಾಯಕರಿಗೆ ತರಬೇತಿ ನೀಡುತ್ತಿದ್ದಾರೆ. ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ. ಅವರ ಪಕ್ಷದಲ್ಲೇ ಸಾವಿರಾರು ಕೋಟಿ ಭ್ರಷ್ಟಾಚಾರವಾಗಿದೆ. ಈ ಬಗ್ಗೆ ತನಿಖೆ ನಡೆಸುವ ಯೋಗ್ಯತೆ ಸರ್ಕಾರಕ್ಕೆ ಇಲ್ಲವೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಈ ವೇಳೆ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಮಾತನಾಡಿ, ಬಿಜೆಪಿಯ ದುರಾಡಳಿತದಿಂದ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮೊದಲು ಸಿಬಿಐ ತನಿಖೆ ನಡೆಸಬೇಕು. ತನಿಖೆ ನಡೆಸದೇ ಕೇವಲ ಸಿಬಿಐ ಹೆಸರನ್ನು ಪ್ರಸ್ತಾಪಿಸಿ ಬೆದರಿಸುವ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಮಣಿಯುವುದಿಲ್ಲ. ಸಿಬಿಐ,ಇಡಿ, ಐಟಿ ಇಲಾಖೆಯನ್ನು ಬಿಜೆಪಿ ಸರ್ಕಾರ ಯಾವ ರೀತಿ ದುರ್ಬಳಕೆ ಮಾಡಿಕೊಂಡಿದೆ ಎಂಬುದು ಜನತೆಗೆ ತಿಳಿದ ವಿಷಯವಾಗಿದೆ ಎಂದು ವಾಗ್ದಾಳಿ ನಡೆಸಿದರು.