ಬಿ.ಎಸ್‌.ಯಡಿಯೂರಪ್ಪ ರಾಜ್ಯದ ಮುಂದಿನ ಮುಖ್ಯಮಂತ್ರಿ: ವಿ. ಸೋಮಣ್ಣ

ಸೋಮವಾರ, 30 ಮೇ 2016 (12:48 IST)
ತುಮಕೂರು: ವಿಧಾನ ಪರಿಷತ್ ಚುನಾವಣೆಗೆ ಪಕ್ಷ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿ. ಸೋಮಣ್ಣ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ. ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ವಿ. ಸೋಮಣ್ಣ ವಿಧಾನಸಭೆಯಿಂದ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಪಕ್ಷ ಟಿಕೆಟ್ ನೀಡಿದ್ದು, ನಾಳೆ ಮುಂಜಾನೆ 10.30ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ. ಹೀಗಾಗಿ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು
 
ಬಿಜಿಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿ. ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಮಾಡಿತ್ತೇವೆ. 2018 ರ ವಿಧಾನ ಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದು ನಮ್ಮ ಗುರಿ. ಕೇಂದ್ರ ಸಚಿವ ಅನಂತ್ ಕುಮಾರ್, ಸದಾನಂದಗೌಡರ ನೇತೃತ್ವದಲ್ಲಿ ಯಡಿಯೂರಪ್ಪನವರ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದು ಹೇಳಿದರು.

 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ