ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ; ಭದ್ರತೆ ನೀಡುವಂತೆ ಗೃಹ ಸಚಿವರಲ್ಲಿ ಮನವಿ

ಬುಧವಾರ, 2 ಡಿಸೆಂಬರ್ 2020 (11:34 IST)
ಬೆಂಗಳೂರು : ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಲಾಗಿದೆ.  

ನವೆಂಬರ್ 25ರಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಕಾರನ್ನು ಅಡ್ಡಗಟ್ಟಿ 8 ಮಂದಿ ಲಾಂಗ್ ತೋರಿಸಿ ಬೆದರಿಕೆ ಹಾಕಿ ಕೈಕಾಲು ಕಟ್ಟಿ ಕಣ್ಣಿಗೆ ಬಟ್ಟೆ ಕಟ್ಟಿ ಕಿಡ್ನಾಪ್ ಮಾಡಿದ್ದಾರೆ. ಬಳಿಕ ಅವರಿಂದ 48 ಲಕ್ಷ ರೂ ಪಡೆದು ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರು ಅಪಹರಣ ಅವರ ಕುಟುಂಬದವರು ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಇದೀಗ ಗೃಹ ಸಚಿವರಿಗೆ ಮಾಹಿತಿ ನೀಡಿದ ವರ್ತೂರು ಪ್ರಕಾಶ್ ಅವರು, ನನಗೆ ಜೀವ ಬೆದರಿಕೆ ಇದೆ. ಈ ಹಿನ್ನಲೆಯಲ್ಲಿ ನನಗೆ ಮತ್ತು ನನ್ನ ಕುಟುಂಬಕ್ಕೆ ಭದ್ರತೆ ನೀಡುವಂತೆ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ