ಕಾಂಗ್ರೆಸ್ ತೆಕ್ಕೆಗೆ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ

ಶುಕ್ರವಾರ, 23 ಮಾರ್ಚ್ 2018 (17:39 IST)
ಮಾಜಿ ರಾಜ್ಯಪಾಲ ದಿವಂಗತ ಬಿ.ರಾಚಯ್ಯ ನವರ ಪುತ್ರ ಹಾಗೂ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾರತೀಯ ಜನತಾ ಪಕ್ಷವನ್ನು ತೊರೆಯುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ತೊರೆಯಲಿರುವ ಅವರು, ಭಾರಿ ವಿರೋಧ ದ ನಡುವೆಯೂ ಮಾರ್ಚ 24ರಂದು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.  
 
ಎ.ಆರ್.ಕೃಷ್ಣಮೂರ್ತಿ ಹೇಳಿದ್ದಿಷ್ಟು: ಚಾಮರಾಜನಗರದಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿರುವ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ತಾವು ಈಗಾಗಲೇ ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ. 
 
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯವರ ಸಮ್ಮಖದಲ್ಲಿ ಮಾರ್ಚ 24ರಂದು ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪಕ್ಷವನ್ನ ಸೇರಲಿದ್ದೇನೆಂದು ಅಧಿಕೃತವಾಗಿ ಪ್ರಕಟಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ