ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

Sampriya

ಶನಿವಾರ, 19 ಏಪ್ರಿಲ್ 2025 (17:22 IST)
Photo Credit X
ಬೆಂಗಳೂರು: ಮಾಜಿ ಶಾಸಕ ಎಟಿ ರಾಮಸ್ವಾಮಿ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರಾಜೀನಾಮೆ ಪತ್ರ ಬರೆದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ಪರಿಸರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಉಲ್ಲೇಖಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್  ತೊರೆದು ರಾಮಸ್ವಾಮಿ ಬಿಜೆಪಿ ಸೇರ್ಪಡೆಯಾಗಿದ್ದರು. ಜೆಡಿಎಸ್ ಜತೆ ಮೈತ್ರಿ ಬಳಿಕ ಅಸಮಾಧಾನಗೊಂಡು  ಬಿಜೆಪಿ ಚಟುವಟಿಕೆಗಳಿಂದ ರಾಮಸ್ವಾಮಿ ದೂರ ಉಳಿದಿದ್ದರು.

ರಾಜಕಾರಣಕ್ಕಿಂತ ಪರಿಸರ ಸಂರಕ್ಷಣೆ ಅತ್ಯಂತ ಮಹತ್ವದ ಕೆಲಸ. ಜಾಗತಿಕ ತಾಪಮಾನ ಹೇರಿಕೆಯಾಗಿದೆ. ಹವಾಮಾನದ ಅಸಮತೋಲನ ಉಂಟಾಗಿದೆ. ಈ ಕುರಿತು ಜನಜಾಗೃತಿ ಮೂಡಿಸಬೇಕಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ