ಬೆಳ್ತಂಗಡಿಯ ಮಾಜಿ ಶಾಸಕ, ನೇರ ನುಡಿಯ ರಾಜಕಾರಣಿ ಕೆ.ವಸಂತ ಬಂಗೇರ ವಿಧಿವಶ

Sampriya

ಬುಧವಾರ, 8 ಮೇ 2024 (18:00 IST)
Photo Courtesy X
ಮಂಗಳೂರು: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿದ್ದ ನೇರ ನುಡಿಯ ಧೀಮಂತ ರಾಜಕಾರಣಿ ಕೆ ವಸಂತ ಬಂಗೇರ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಅಲ್ಪಕಾಲದ ಅನಾರೋಗ್ಯದಿಂದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಇಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.

ಕೇದೆ ಸುಬ್ಬ ಪೂಜಾರಿ - ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿತ್ತು.

ನಾಳೆ ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ