ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ನಾಪತ್ತೆ, ಘಟನೆ ಹಿಂದಿದೆಯಾ ಮಹಿಳೆಯ ಕೈವಾಡ

Sampriya

ಭಾನುವಾರ, 6 ಅಕ್ಟೋಬರ್ 2024 (15:55 IST)
Photo Courtesy X
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಶನಿವಾರದಿಂದ ನಾಪತ್ತೆಯಾಗಿದ್ದು, ಇಂದು ಅವರ ಕಾರು ಅಪಘಾತದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತಂಕ ಮೂಡಿಸಿದೆ.  ಸಾಯುವುದಾಗಿ ಮನೆಯವರಿಗೆ ತಿಳಿಸಿ ಮಮ್ತಾಜ್​ ತೆರಳಿದ್ದರು ಎನ್ನಲಾಗಿದೆ.

ಸದ್ಯ ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುಮ್ತಾಜ್ ಅಲಿ ನಾಪತ್ತೆ ಪ್ರಕರಣದ ಹಿಂದೆ ಮಹಿಳೆಯೊಬ್ಬರ ಕೈವಾಡವಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.  ಮುಮ್ತಾಜ್‌ಗೆ ಮಹಿಳೆಯೊಬ್ಬರಳು ಬೆದರಿಕೆ ಹಾಕಿ ಮದುವೆಗೆ ಒತ್ತಡ ಮಾಡುತ್ತಿದ್ದಳು.  ವಿಡಿಯೋ ಮುಂದಿಟ್ಟು ಬ್ಲಾಕ್‌ಮೇಲ್ ಮಾಡಿರುವುದಾಗಿ ತಿಳಿದುಬಂದಿದೆ. ಇದರಿಂದ ಬೇಸತ್ತು ಮುಮ್ತಾಜ್ ಅವರು ಆತ್ಮಹತ್ಯೆಗೆ ಮುಂದಾದ್ರ ಎನ್ನಲಾಗುತ್ತಿದೆ.

52 ವರ್ಷದ ಮುಮ್ತಾಜ್ ಅಲಿ ಬಿಎಂಡಬ್ಲ್ಯು ಎಕ್ಸ್‌ವೈಕಾರಿನಲ್ಲಿ ತೆರಳಿದ್ದು, ಮಂಗಳೂರು ಹೊರವಲಯದ ಕೂಳೂರು ಬ್ರಿಡ್ಜ್​ ಬಳಿ ಕಾರು ಅಪಘಾತದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದೆ.

ಸ್ಥಳದಲ್ಲಿ ಸಾರ್ವಜನಿಕರು ಗುಂಪುಗೂಡಿದ್ದಾರೆ. ಡಿಸಿಪಿ, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮಾಜಿ ಶಾಸಕ ಮೊಯಿದ್ದೀನ್ ಬಾವ ಕುಟುಂಬಸ್ಥರೂ ಸ್ಥಳಕ್ಕೆ ತೆರಳಿದ್ದಾರೆ.

ನದಿಯಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್, ಅಗ್ನಿಶಾಮಕದಳದಿಂದ ಹುಡುಕಾಟ ನಡೆಸಿದ್ದಾರೆ. ಆದರೆ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ನಸುಕಿನ ಜಾವ 3 ಗಂಟೆಗೆ ಮುಮ್ತಾಜ್ ಅಲಿ ಮನೆಯಿಂದ ತೆರಳಿದ್ದಾರೆ ಎನ್ನಲಾಗಿದೆ. ಅವರು ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ತೊಡಗಿಸಿಕೊಂಡಿದ್ದಾರೆ.




ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ