ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ

ಸೋಮವಾರ, 10 ಏಪ್ರಿಲ್ 2023 (09:06 IST)
ಹಾಸನ : ಜೆಡಿಎಸ್ ತೊರೆದಿದ್ದ ಅರಸೀಕೆರೆ ಮಾಜಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಭಾನುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
 
ಮೂರು ಬಾರಿ ಜೆಡಿಎಸ್ನಿಂದ ಶಾಸಕರಾಗಿದ್ದ ಶಿವಲಿಂಗೇಗೌಡ ಅವರು ಈಚೆಗಷ್ಟೇ ಜೆಡಿಎಸ್ ಪಕ್ಷ ತೊರೆದಿದ್ದರು. ಜೊತೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೂಡ ಸಲ್ಲಿಸಿದ್ದರು. ಇದೀಗ ಅರಸೀಕೆರೆ ಪಟ್ಟಣದ ಜೇನುಕಲ್ಲು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. 

ಕಾಂಗ್ರೆಸ್ ಸೇರಿ ನಂತರ ಮಾತನಾಡಿದ ಶಿವಲಿಂಗೇಗೌಡ, ನನ್ನ ಹಣೆಬರಹದಲ್ಲಿ ಬರೆದಿತ್ತು ಅಂತ ಕಾಣುತ್ತೆ. ಸಿದ್ದರಾಮಯ್ಯ ಅವರು ಜೆಡಿಎಸ್ ತೊರೆದು ಹೇಗೆ ಕಾಂಗ್ರೆಸ್ ಸೇರಿದರೋ, ಅದೇ ರೀತಿ ನಾನು ಕಾಂಗ್ರೆಸ್ ಸೇರಬೇಕು ಅಂತ ನನ್ನ ಹಣೆಯಲ್ಲೂ ಬರೆದಿತ್ತು. ಅದಕ್ಕೆ ಇವತ್ತು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಬಹಳ ಸಂತೋಷದಿಂದ ಇವತ್ತು ಕಾಂಗ್ರೆಸ್ ಸೇರಿದ್ದೇನೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ