ಮಾಜಿ ಶಾಸಕ ಉಮೇಶ್ ಭಟ್ ಹೃದಯಾಘಾತದಿಂದ ನಿಧನ

ಬುಧವಾರ, 14 ಆಗಸ್ಟ್ 2019 (11:01 IST)
ಅಂಕೋಲಾ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಕ್ಷೇತ್ರದ ಮಾಜಿ ಶಾಸಕ ಉಮೇಶ್ ಭಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ.



ಇವರಿಗೆ 72 ವರ್ಷ ವಯಸ್ಸಾಗಿದ್ದು, ಮಂಗಳವಾರದಂದು ತಮ್ಮ ಸ್ನೇಹಿತರನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

 

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೆರೆ ಗ್ರಾಮದವರಾದ ಉಮೇಶ್‌ ಭಟ್‌,ಅವರು 1989ರಲ್ಲಿ ಅಂಕೋಲಾ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದ್ದರು. ಕೆಪಿಸಿಸಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಎಸ್.ಎಂ. ಕೃಷ್ಣ ಸರ್ಕಾರದ ಅವಧಿಯಲ್ಲಿ 'ನಮ್ಮ ಮೆಟ್ರೋ' ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಉಮೇಶ್ ಭಟ್ ಅವರ ನಿಧನಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ