ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆಂದು ಅವಾಜ್ ಹಾಕಿದ ಮಾಜಿ ಶಾಸಕ !
ಶನಿವಾರ, 20 ಅಕ್ಟೋಬರ್ 2018 (15:56 IST)
ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಪೇದೆಗಳ ವಿರುದ್ಧ ಮಾಜಿ ಶಾಸಕ ಅವಾಜ್ ಹಾಕಿದ್ದಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ರಾಜಾವೆಂಕಟಪ್ಪ ನಾಯಕ ಸುರಪುರ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಪೇದೆಗಳ ವಿರುದ್ಧ ಅವಾಜ್ ಹಾಕಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.
ಅದೇ ರೀತಿ ಪಿಐ ಹರೀಬಾ ಜಮಾದರ್ ಹಾಗೂ ಡಿವೈಎಸ್ಪಿ ಶಿಲವಂತ ಹೊಸಮನಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆಂದು ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಿಐ ಹರೀಬಾ ಜಮಾದರ್ ಭೇಟಿ ವೇಳೆ, ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕರಿಂದ ಪಿಐಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ.
ಇದಕ್ಕೂ ಮುನ್ನ ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಸೇರಿ ಸುಮಾರು 10 ಜನ ಠಾಣೆಗೆ ತೆರಳಿ ಪೊಲೀಸರಿಗೆ ನಿಂದನೆ ಮಾಡಿದ್ದರು ಎನ್ನಲಾಗಿದೆ.
ನಂತರ ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಠಾಣೆಗೆ ತೆರಳಿ ಅವಾಜ್ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಸುರಪುರ ಠಾಣೆ ಮುಖ್ಯ ಪೇದೆ ಶಂಭುರಾವ್ ನಿಂದ ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಸೇರಿ 8 ಜನರ ವಿರುದ್ಧ ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.