ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಲಲು ಝೀರೋ ಟ್ರಾಫಿಕ್ ಕಾರಣ- ಡಿಸಿಎಂ ವಿರುದ್ಧ ಕಿಡಿಕಾರಿದ ಮಾಜಿ ಶಾಸಕ
ಸೋಮವಾರ, 27 ಮೇ 2019 (14:41 IST)
ತುಮಕೂರು : ಮೈತ್ರಿ ಮಾಡಿಕೊಂಡು ಜೆಡಿಎಸ್ ಗೆ ಬಿಟ್ಟು ಕೊಟ್ಟ ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ತುಮಕೂರು ಲೋಕಸಭಾ ಕ್ಷೇತ್ರ ಇದೀಗ ಬಿಜೆಪಿ ಪಾಲಾಗಿರುವುದಕ್ಕೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆಯಾಗಿತ್ತು. ಮೈತ್ರಿಕೂಟದ ಅಭ್ಯರ್ಥಿ ಇಲ್ಲಿ ಸೋಲಲು ಝೀರೋ ಟ್ರಾಫಿಕ್ ಕಾರಣ ಎಂದು ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಪರಮೇಶ್ವರ್ ವಿರುದ್ಧ ಕಿಡಿಕಾರಿದ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆತನ ಗೆಲುವಿಗೆ ನಾನು ನೆರವಾಗಿದ್ದೆ. ಇದರ ಸ್ಮರಣೆಯೇ ಆತನಿಗಿಲ್ಲ ಎಂದು ಗುಡುಗಿದ್ದಾರೆ.
ಅಲ್ಲದೇ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರದ ಬಳಿಕ ರಾಜ್ಯದ ಮೈತ್ರಿ ಸರ್ಕಾರ ಪತನವಾಗಲಿದ್ದು, ಜೀರೋ ಟ್ರಾಫಿಕ್ ವಾರದೊಳಗೆ ಮಾಜಿಯಾಗಲಿದೆ ಎಂದು ಪರಮೇಶ್ವರ್ ಅವರ ವಿರುದ್ಧವಾಗ್ದಾಳಿ ನಡೆಸಿದ್ದಾರೆ.