ಲಕ್ನೋ : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಅವರನ್ನು ಎಸ್ ಐ ಟಿ ಪೊಲೀಸರು ಬಂಧಿಸಿದ್ದಾರೆ.
ಕಾನೂನು ವಿದ್ಯಾರ್ಥಿನಿಯೊಬ್ಬರು ತನ್ನ ಮೇಲೆ ಚಿನ್ಮಯಾನಂದ ಅವರು ಅತ್ಯಾಚಾರ ಎಸಗಿದ್ದಾರೆ. ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.
ಈ ಹಿನ್ನಲೆಯಲ್ಲಿ ಚಿನ್ಮಯಾನಂದ ಅವರನ್ನು ಉತ್ತರ ಪ್ರದೇಶದ ವಿಶೇಷ ತನಿಖಾ ತಂಡ (ಎಸ್‍ಐಟಿ) ಇಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಧೀಶರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.