ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಉತ್ತರ ಕರ್ನಾಟಕ ರೈತ ಸಂಘದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಹಾವೇರಿ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಹೊರಟು ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಕಾಲ್ನಡಿಗೆಯಲ್ಲಿ ಬಂದ ಪ್ರತಿಭಟನಾ ನೀರತ ರೈತರು. ಹಾವೇರಿಯ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿ ಒಂದು ಘಂಟೆಗು ಹಚ್ಚು ಕಾಲ ರಸ್ತೆ ತಡೆದು ಪ್ರತಿಭಟನೆ ಮಾಡಿದ್ರು.
ಉತ್ತರ ಕರ್ನಾಟಕದ ನಿರ್ಲಕ್ಷ್ಯಕ್ಕೆ ರೈತ ಸಂಘವು ತೀವ್ರವಾದ ಆಕ್ರೋಶವನ್ನು ವ್ಯಕ್ತ ಪಡಿಸಿ. ಬಗರ್ ಹುಕಂ ಮತ್ತು ರೈತರ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ್ರು. ಉತ್ತರ ಕರ್ನಾಟಕವನ್ನ ಪ್ರತೇಕ ರಾಜ್ಯದ ಘೋಷಣೆ ಮೊಳಗಿಸಿದ ರೈತರು, ಸಮ್ಮಿಶ್ರ ಸರಕಾರದ ವಿರುದ್ಧ ಘೋಷಣೆಯನ್ನು ಕೂಗಿ ಪ್ರತಿಭಟನೆಯನ್ನು ಮಾಡಿದ್ರು. ಪ್ರತಿಭಟನೆಯಲ್ಲಿ ನೂರಾರು ರೈತರು, ರೈತ ಮಹಿಳೆಯರು ಭಾಗಿಯಾಗಿದ್ದರು.