ಸಂಚಾರಕ್ಕೆ ಅನುವು ಮಾಡಿದ ಬೆನ್ನಲ್ಲೇ ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ, ನಾಲ್ವರು ಸಾವು

Sampriya

ಸೋಮವಾರ, 3 ಮಾರ್ಚ್ 2025 (14:15 IST)
Photo Courtesy X
ಬಂಗಾರಪೇಟೆ: ತಾಲ್ಲೂಕಿನ ಕುಪ್ಪನಹಳ್ಳಿ ಬಳಿಯ ಚೆನ್ನೈ- ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದ್ಆರೆ.

ಮೃತರನ್ನು ಕೆಜಿಎಫ್‌ ತಾಲ್ಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ(45), ಉದ್ವಿತ(2), ರತ್ನಮ್ಮ(60) ಹಾಗೂ ಬೈಕ್‌ ಸವಾರ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಸುಶ್ಮಿತಾ, ವಿರುತ, ಸುಜತ, ಸುನಿಲ್ ಗಂಭೀರ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇನ್ನೂ ಈ ಹೈವೇಯನ್ನು ಈಚೆಗೆ ಕಾಮಗಾರಿ ಮುಗಿದು ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.  ಬಂಗಾರಪೇಟೆ ಪೊಲೀಸ್ ಠಾಣೆಯಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ