ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಬಳಗದ ಮಾಜಿ ಜಿಲ್ಲಾಧ್ಯಕ್ಷ ಅನ್ವರ್ ಜಮಾದರ್ನನ್ನು ವಂಚನೆಯ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ನಿರುದ್ಯೋಗಿಗಳನ್ನು ಸಂಪರ್ಕಿಸಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಅವರಿಂದ 4 ರಿಂದ 8 ಲಕ್ಷ ರೂ ಹಣ ಪಡೆದು ವಂಚಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಳಗಾವಿ, ದಾವಣಗೆರೆ ವಿಜಯಪುರ, ಜಿಲ್ಲೆಯಲ್ಲಿರುವ ನಿರುದ್ಯೋಗಿಗಳನ್ನು ಆರೋಪಿ ಜಮಾದಾರ್, ಸಚಿವ ಡಿ.ಕೆ.ಶಿವಕುಮಾರ್ ಹೆಸರು ಬಳಸಿ ವಂಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಪೊಲೀಸರು ಆರೋಪಿ ಅನ್ವರ್ ಜಾಮಾದಾರ್ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.