ಉಚಿತ ಸೌಲಭ್ಯ : ಸೌಲಭ್ಯ ಕೊಟ್ಟು ಕಿತ್ತುಕೊಂಡಂತಾಗಿದೆ
ಉಚಿತ ವಿದ್ಯುತ್ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ನಿಗಮಗಳಲ್ಲಿ ವಿದ್ಯುತ್ ದರ ಹೆಚ್ಚಿಸಲಾಗಿದೆ.
ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್ ಉಚಿತ ಸೌಲಭ್ಯ ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ದರ ಏರಿಕೆ ಆದೇಶವನ್ನ ಮರುಪರಿಶೀಲಿಸಿ, ಜನಸಾಮಾನ್ಯರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದ ಕೋರಿದ್ದಾರೆ.