ಬಿಬಿಎಂಪಿ ವತಿಯಿಂದ ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

ಗುರುವಾರ, 14 ಜುಲೈ 2022 (19:51 IST)
ಬಿಬಿಎಂಪಿ ವತಿಯಿಂದ ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಒಪ್ಪಿಗೆ ನೀಡಿದ್ದಾರೆ. ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ 41.5 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಲ್ಯಾಪ್‌ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತರು ಹಸಿರು ನಿಶಾನೆ ತೋರಿದ್ದಾರೆ. ಶೀಘ್ರದಲ್ಲೇ ಯೋಜನೆಗೆ ಟೆಂಡರ್ ಕರೆಯಲಾಗುವುದು ಎಂದು ಪಾಲಿಕೆ ವಿಶೇಷ ಆಯುಕ್ತ ರಾಮಪ್ರಸಾದ್ ಮನೋಹರ್ ರಾಜ್ ನ್ಯೂಸ್ ಗೆ ತಿಳಿಸಿದ್ದಾರೆ. ಬಿಬಿಎಂಪಿ ನಗರದಲ್ಲಿ 15 ಪಿಯು ಕಾಲೇಜ್ ಗಳು ಮತ್ತು ನಾಲ್ಕು ಪದವಿ ಕಾಲೇಜುಗಳನ್ನು ಹೊಂದಿದ್ದು, ಕ್ರಮವಾಗಿ 4,398 ಮತ್ತು 1,104 ವಿದ್ಯಾರ್ಥಿಗಳನ್ನು ಹೊಂದಿದೆ. ಪಾಲಿಕೆಯು 71 ವಿದ್ಯಾರ್ಥಿಗಳೊಂದಿಗೆ ಎರಡು ಸ್ನಾತಕೋತ್ತರ ಕಾಲೇಜುಗಳನ್ನು ಹೊಂದಿದೆ. SC/ST, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ