SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಉಚಿತ ಮಾಸ್ಕ್

ಶನಿವಾರ, 16 ಮೇ 2020 (17:45 IST)
ಪ್ರಸಕ್ತ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಿಗೆ ಇಲ್ಲಿ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಗುತ್ತದೆ.

ಗದಗ ಜಿಲ್ಲೆಯ 14,000 ವಿದ್ಯಾರ್ಥಿಗಳಿಗೆ ಮತ್ತು ಪರೀಕ್ಷೆ ವ್ಯವಸ್ಥೆಯಲ್ಲಿ ಭಾಗವಹಿಸುವ ಅಧಿಕಾರಿ ಸಿಬ್ಬಂದಿಗೆ ಕೊವಿಡ್-19 ಸೋಂಕು ತಡೆ ಸುರಕ್ಷೆಗಾಗಿ  ಗದಗ ಜಿಲ್ಲಾ ಪಂಚಾಯತದಿ೦ದ ಮುಖಕ್ಕೆ ಧರಿಸುವ ಮಾಸ್ಕನ್ನು ಉಚಿತವಾಗಿ ನೀಡಲಿದೆ.

ಗದಗ ಜಿ.ಪಂ. ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಕೊಳ್ಳಲಾಗಿದೆ ಎಂದು ಗದಗ ಜಿಲ್ಲಾ ಪಂಚಾಯಿತ ಅಧ್ಯಕ್ಷ ಎಸ್.  ಎಚ್. ಪಾಟೀಲ ತಿಳಿಸಿದರು.

ಜಿಲ್ಲೆಯ 58 ಎಸ್.ಎಸ್.ಎಲ್.ಸಿ ಪರೀಕ್ಷಾ ಮುಖ್ಯ ಹಾಗೂ 7 ಉಪಕೇಂದ್ರಗಳಿಗೆ ಕೇಂದ್ರಗಳಿಗೆ ಆರೋಗ್ಯ ಇಲಾಖೆ ಉಚಿತವಾಗಿ ಸ್ಯಾನಿಟೈಜರ್ ನೀಡಬೇಕು ಹಾಗೂ ಸಿಬ್ಬಂದಿ ನಿಯೋಜಿಸಿ ಪ್ರತಿ ವಿದ್ಯಾರ್ಥಿಯನ್ನು ಥರ್ಮೋಮೀಟರ ಮೂಲಕ ಪರೀಕ್ಷಿಸಬೇಕು ಎ೦ದು ಪಾಟೀಲ ಸೂಚಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ