ಮತದಾನ ಮಾಡಿದವರಿಗೆ ಹೊಟೇಲ್‌ಗಳಲ್ಲಿ ಉಚಿತ ಊಟ ನೀಡಲು ಹೈಕೋರ್ಟ್ ಅನುಮತಿ
ಕಳೆದ ವಿಧಾನಸಭೆ ಚುನಾವಣೆ ವೇಳೆಯೂ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನ ಕೆಲವು ಹೋಟೆಲ್ಗಳು ಇದೇ ರೀತಿಯ ಪ್ರಯತ್ನ ಮಾಡಿದ್ದವು.
ಅರ್ಜಿದಾರರು ಕೋರ್ಟ್‌ಗ್ ಸಲ್ಲಿಸಿದ ಅರ್ಜಿಯಲ್ಲಿ ಬೆಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಕಡಿಮೆ ಮತದಾನವಾಗುತ್ತಿದೆ. ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಉಚಿತ ಆಹಾರ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದರು.