ರಾಜ್ಯ ಸರ್ಕಾರದಿಂದ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಹೆಚ್1 ಎನ್1 ರೋಗಕ್ಕೆ ಉಚಿತ ಚಿಕಿತ್ಸೆ

ಭಾನುವಾರ, 18 ನವೆಂಬರ್ 2018 (15:36 IST)
ದಾವಣಗೆರೆ : ರಾಜ್ಯದಲ್ಲಿ ಜನರು ಹೆಚ್1 ಎನ್1 ರೋಗಕ್ಕೆ ಬಲಿಯಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಹೆಚ್1 ಎನ್1 ರೋಗಕ್ಕೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಂದು ತಿಳಿಸಿದ್ದಾರೆ.


ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಸಿಎಂ, ಹೆಚ್1 ಎನ್1 ಆರೋಗ್ಯ ಯೋಜನೆಯ ಚಿಕಿತ್ಸೆ ಪಡೆಯಲು ಸಾಧ್ಯವಾಗದಿರುವ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಲೋಪ ಸರಿಪಡಿಸುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.


ಇದೇ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರು, ‘ರಾಜ್ಯದಲ್ಲಿ ಹೆಚ್ 1 ಎನ್ 1 ನ್ನು ಸರ್ಕಾರ ನಿಯಂತ್ರಿಸುತ್ತಿದೆ. ಗುಜರಾತ್ ನಲ್ಲಿ 1,644 ಮಂದಿಗೆ ಸೊಂಕು ತಗುಲಿದ್ದು,51 ಜನ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ 2,149 ಸೋಂಕಿತರಲ್ಲಿ 2,059 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 1050 ಮಂದಿಗೆ ಸೋಂಕು ತಗುಲಿದ್ದು, 19 ಜನ ಮೃತಪಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ