ದೊರಕದ ಉಚಿತ ಬಸ್ ಪಾಸ್: ಪ್ರತಿಭಟನೆ ಹಾದಿ ಹಿಡಿದ ವಿದ್ಯಾರ್ಥಿಗಳು

ಶುಕ್ರವಾರ, 6 ಜುಲೈ 2018 (16:51 IST)
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಮಂಡಿಸಿದ ಬಜೆಟ್‌ ನಲ್ಲಿ ಶಿಕ್ಷಣ ಕೇತ್ರವನ್ನು ಕಡೆಗಣಿಸಲಾಗಿದೆ ಹಾಗೂ ವಿದ್ಯಾರ್ಥಿಗಳಿ ಉಚಿತ ಬಸ್ ಪಾಸ್ ಬಜೆಟ್‌ನಲ್ಲಿ ಘೋಷಣೆ ಮಾಡದೆ ಇರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಹೊಸುರ ವೃತದಿಂದ ತಹಸಿಲ್ದಾರ ಕಚೇರಿವರೇಗೆ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದ ನೂರಾರು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಕಳೆದ ದಿನ ಮಯಖ್ಯಮಂತ್ರಿ ಹೆಚ್‌ಡಿಕೆಯವರು ಬಜೆಟ್‌ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಹಾಗೂ ಶಿಕ್ಷಣ ಇಲಾಖೆ ಹೆಚ್ಚಿನ ಅನುದಸನ ನೀಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಗಿದೆ ಎಂದು ದೂರಿದರು. 

 ಸಿಎಂ ಕುಮಾರಸ್ವಾಮಿಯವರು  ಕೂಡಲೇ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನಿದಾನ ನೀಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ