ಮಾನಸಿಕ ಅಸ್ವಸ್ಥೆಯನ್ನು ನಿರಂತರವಾಗಿ ತನ್ನ ಕಾಮ ತೃಷೆಗೆ ಬಳಸಿಕೊಂಡ ಕಾಮುಕ!
ಭಾನುವಾರ, 21 ಜನವರಿ 2018 (11:11 IST)
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಮಾಡಿದ ಘಟನೆ ನಡೆದಿದೆ.
ಈಜಾಜ್ ಪಾಷ ಎಂಬಾತನು ಅತ್ಯಾಚಾರ ಎಸಗಿದ ವ್ಯಕ್ತಿ. ಈತ ಮಹಿಳೆ ಮನೆ ಪಕ್ಕದಲ್ಲಿದ್ದ ತೋಟದ ಕೆಲಸ ಮಾಡುತ್ತಿದ್ದು, ಆಕೆಯ ವೃದ್ದ ತಂದೆ ತಾಯಿ ಕೆಲಸಕ್ಕೆ ಹೋದ ವೇಳೆ ಈ ನೀಚ ಕೃತ್ಯವನ್ನು ಎಸಗಿದ್ದಾನೆ ಎಂದು ತಿಳಿದುಬಂದಿದೆ. ಹಾಗೆ ವಿಷಯ ತಂದೆ ತಾಯಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಕೂಡ ಬೆದರಿಕೆ ಹಾಕಿದ್ದನು. ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆದ ವಿಷಯ ಬೆಳಕಿಗೆ ಬಂದಿದೆ. ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ