ವಿಶ್ವ ವಿಖ್ಯಾತ ಹಂಪಿಗೆ ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ಶುಕ್ರವಾರ ನೂರಾರು ಭಕ್ತರು ವಿರೂಪಾಕ್ಷೇಶ್ವರ ದರ್ಶನ ಪಡೆದು ಪುನೀತರಾದರು.

ಶುಕ್ರವಾರ, 9 ಜುಲೈ 2021 (14:07 IST)
ವಿರೂಪಾಕ್ಷೇಶ್ವರ ಅಮವಾಸ್ಯೆ ಅಂಗವಾಗಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಪಂಪಾಂಬಿಕ, ಭುವನೇಶ್ವರಿ ದೇವಿಯ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ಅಲಂಕಾರವನ್ನು ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನವನ್ನು ಪಡೆದರು. ದೇವಸ್ಥಾನದಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಲಾಗಿತ್ತು. ದೇವಸ್ಥಾನದ ಸಿಬ್ಬಂದಿ ಭಕ್ತರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಿದರು. 
ಇದಕ್ಕೂ ಮುನ್ನ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನವನ್ನು ಮಾಡಿದರು. ದೇವಸ್ಥಾನಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಹಾಗೂ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಭಕ್ತರು ಆಗಮಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ