ಜುಲೈ 28ರಿಂದ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಸೋಮವಾರ, 26 ಜುಲೈ 2021 (19:45 IST)

ಬೆಂಗಳೂರು: ಬಂಗಾಳ ಉಪಸಾಗರದ ಉತ್ತರ ಭಾಗದಲ್ಲಿ ಜುಲೈ 28ರಂದು ವಾಯುಭಾರ ಕುಸಿತ ಉಂಟಾಗುವ ಹೆಚ್ಚಿನ ಸಾದ್ಯತೆಯಿದೆ. ಈ ಪ್ರಭಾವದಿಂದ ರಾಜ್ಯಾದ್ಯಂತ ಜುಲೈ 30ರವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲ ಸ್ಥಳಗಳಲ್ಲಿ ಜುಲೈ 26ರಿಂದ 30ರವರೆಗೆ ವ್ಯಾಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ

ಲ್ಲಿ ಜುಲೈ 26ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗುವ ಹೆಚ್ಚಿನ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ನೈರುತ್ಯ ಮುಂಗಾರು ಸೋಮವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು ಹಾಗೂ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಕಡೆ, ದಕ್ಷಿಣ ಒಳನಾಡಿನಲ್ಲಿ ಹಲವು ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗಿದೆ.

ಮುಖ್ಯವಾಗಿ, ಕೊಡಗಿನ ಭಾಗಮಂಡಲದಲ್ಲಿ 13 ಸೆಂ.ಮೀ, ದಕ್ಷಿಣ ಕನ್ನಡದ ಸುಬ್ರಮಣ್ಯದಲ್ಲಿ 11 ಸೆಂ.ಮೀ, ಪುತ್ತೂರು ಹಾಗೂ ಉಪ್ಪಿನಂಗಡಿಯಲ್ಲಿ ತಲಾ 10 ಸೆಂ.ಮೀ, ಸುಳ್ಯ, ಕೊಡಗಿನ ವಿರಾಜಪೇಟೆಯಲ್ಲಿ ತಲಾ 9 ಸೆಂ.ಮೀ, ಧರ್ಮಸ್ಥಳ, ಬೆಳ್ತಂಗಡಿಯಲ್ಲಿ ತಲಾ 8 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ