ಜೂನ್ 1 ರಿಂದ ನು ನೈರುತ್ಯ ಮುಂಗಾರು ಆರಂಭ
ನೈಋುತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1ರಿಂದ ರಾಜ್ಯಕ್ಕೆ ಪ್ರವೇಶವಾಗಲಿದೆ. ಜೂನ್ 2ರಂದು ಮಳೆ ಭರ್ಜರಿಯಾಗಿ ಸುರಿಯುವ ಸಾಧ್ಯತೆ ಹೆಚ್ಚಿರುವುದರಿಂದ ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಹಳದಿ ಅಲರ್ಚ್ ನೀಡಲಾಗಿದೆ. ಇನ್ನು ಮುಂಗಾರು ಮಳೆ ವಾಡಿಕೆಗಿಂತ ಮೂರು ದಿನ ಮೊದಲೇ ಮುಂಗಾರು ಕೇರಳ ಪ್ರವೇಶಿಸಿದೆ. ಮುಂಗಾರು ಕೇರಳಕ್ಕೆ ಕಾಲಿಟ್ಟನಾಲ್ಕೈದು ದಿನದಲ್ಲಿ ರಾಜ್ಯವನ್ನು ಪ್ರವೇಶಿಸುವುದು ಮಾಮೂಲಿ. ಆದ್ದರಿಂದ ಜೂನ್ ಮೊದಲ ವಾರದಲ್ಲಿ ರಾಜ್ಯಾದ್ಯಾಂತ ಮುಂಗಾರು ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.