ಇನ್ಮುಂದೆ ಸಿಗರೇಟ್ ಹೊಗೆ ರೋಡಲ್ಲಿ ಬಿಟ್ರೆ ಹುಷಾರ್, ಬೆಂಗ್ಳೂರಿನ ಹೊಟೇಲ್, ಪಬ್, ಬಾರ್‌ಗಳಿಗೆ ಹೊಸ ರೂಲ್ಸ್
ಧೂಮಪಾನ ವಲಯ ನಿರ್ಮಾಣ ಮಾಡಿ ಪೋಟೋ ಸಮೇತ ಸ್ಮೋಕಿಂಗ್ ಝೂನ್‌ಗೆ ಪರವಾನಗಿಗೆ ಅರ್ಜಿ ಹಾಕಬೇಕು.
ಅಧಿಕಾರಿಗಳು ಸ್ಥಳಕ್ಕೆ ಭೇಟಿ ನಿಯಮಾನುಸಾರ ಸ್ಮೋಕಿಂಗ್ ಝೂನ್ ಇದೆಯೇ ಅಂತ ರಿಪೋರ್ಟ್ ಕೊಟ್ಟರೆ, ಆಮೇಲೆ ಎನ್‌ಒಸಿ ವಿತರಣೆಗೆ ಸೂಚನೆ ನೀಡಲಾಗುತ್ತದೆ.
ಸ್ಮೋಕಿಂಗ್ ಏರಿಯಾ ಕೊಠಡಿಗೆ ಎಂಟ್ರಿ ಆದಾಗ ಸ್ವಯಂಚಾಲಿತವಾಗಿ ಬಾಗಿಲು ಬಂದ್ ಆಗುವ ರೀತಿಯಲ್ಲಿ ಇರಬೇಕು.
ಸ್ಮೋಕಿಂಗ್ ಏರಿಯಾ ಅಂತ ನಾಮಫಲಕ ದೊಡ್ಡದಾಗಿ ಇರಬೇಕು. 60-30ರ ನಿಯಮದಲ್ಲಿ ಅಕ್ಷರಗಳು ಇರಬೇಕು.
ಸ್ಮೋಕಿಂಗ್ ಝೂನ್‌ಗಳಲ್ಲಿ ಏರ್ ಫ್ಲೋ ಸಿಸ್ಟಂ ಇರಬೇಕು. ಯಾವುದೇ ಕಾರಣಕ್ಕೂ ಧೂಮಪಾನದ ಹೊಗೆಪಕ್ಕದ ಮನೆ ಅಥವಾ ಪಕ್ಕದ ಕಟ್ಟಡಗಳಿಗೆ ಹೋಗಬಾರದು ಎಂದು ಉಲ್ಲೇಖಿಸಲಾಗಿದೆ.