ನಾಳೆಯಿಂದ ನಗರದಲ್ಲಿ ಏರೋ ಇಂಡಿಯಾ ಶೋ

ಸೋಮವಾರ, 13 ಫೆಬ್ರವರಿ 2017 (20:33 IST)
ಏರೋ ಇಂಡಿಯಾ ಶೋ ನಾಳೆಯಿಂದ ಆರಂಭವಾಗಲಿದೆ. ಏರೋ ಶೋ ವೀಕ್ಷಿಸಲು ಸಾವಿರಾರು ಜನ ಆಗಮಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. 
 
ಸಾವಿರಾರು ಸಂಖ್ಯೆಯ ಪಾಸ್ ಮತ್ತು ಟಿಕೆಟ್‌ಗಳು ಈಗಾಗಲೇ ಸೋಲ್ಡ್‌ಔಟ್ ಆಗಿವೆ ಎನ್ನಲಾಗಿದೆ. ವಿಶೇಷವೆಂದರೆ, ಈ ಬಾರಿಯ ಏರ್ ಶೋಗೆ ಚೀನಾದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ಜನರನ್ನು ರಂಜಿಸಲಿವೆ..
 
ಟ್ರಾಫಿಕ್ ಸಮಸ್ಯೆಯನ್ನು ತಡೆಯಲು ಏರ್‌ ಶೋ ಕಾರ್ಯಕ್ರಮಕ್ಕೆ ಆಗಮಿಸುವ ಜನರು ತಮ್ಮ ಸ್ವಂತ ವಾಹನಗಳನ್ನು ಬಳಸಿಕೊಳ್ಳುವುದು ಬಿಟ್ಟು ಬಿಎಂಟಿಸಿ ಬಸ್‌ಗಳಲ್ಲಿ ಆಗಮಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
 
ಹೆಚ್ಚಿನ ಸಂಖ್ಯೆಯ ಜನರು ತಮ್ಮ ತಮ್ಮ ಕಾರುಗಳಲ್ಲಿ ಆಗಮಿಸಿದಲ್ಲಿ ಸಂಚಾರ ವ್ಯವಸ್ಥೆ ಹದಗೆಡುವ ಸಾಧ್ಯತೆಗಳಿರುವುದರಿಂದ ಜನತೆ ಸಂಚಾರಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ