ಕರ್ನಾಟಕ ಬಂದ್‌ಗೆ ಬಿಜೆಪಿಯಿಂದ ಪೂರ್ಣ ಬೆಂಬಲ:-ಬೊಮ್ಮಾಯಿ
ಕಾವೇರಿ ನೀರಿನ ವಿಷಯವಾಗಿ ಇವತ್ತು ಸಹ ಮುಖ್ಯಮಂತ್ರಿಗಳ ಹೇಳಿಕೆ ನೋಡಿದ್ದೇನೆ. ಈಗ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ ಬಂದಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಸರಿಯಾದ ವಾದ ಮಂಡನೆ ಮಾಡಿದ್ದರೆ ಇಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ ಅಂತಾ ಮಾಜಿ ಸಿ ಎಮ್ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸರ್ಕಾರ ಈಗ ಎಚ್ಚೆತ್ತುಕೊಂಡಿದೆ. ಈಗಾಗಲೇ ಕುಡಿವ ನೀರಿಗೆ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಕಾವೇರಿಯೇ ಆಗಿರಲಿ, ಕೃಷ್ಣೆಯ ಆಗಿರಲಿ ಸರ್ಕಾರ ಜನರ ಹಿತರಕ್ಷಣೆ ಮಾಡಬೇಕು. ಸರ್ಕಾರ ಎಡವಿದರೆ ನಾವು ಹೋರಾಟ ಮಾಡುತ್ತೇವೆ ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.