NCP ಯಿಂದ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣ-ಶಾಸಕ ಅಶ್ವತ್ಥನಾರಾಯಣ
ಗ್ರಾಮೀಣ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ವಿಶ್ವಮಾನ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಸಂಕಲ್ಪರಾಷ್ಟ್ರೀಯ ಶಿಕ್ಷಣ ನೀತಿ ಹೊಂದಿದೆ.NCP ಯಿಂದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದು ಎಂದು ಮಾಜಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಖಾಸಗಿ ಶಿಕ್ಷಣ ಸಂಸ್ಥೆಗಳು ಸಹಜವಾಗಿ ಕೇಂದ್ರದ CBSC ಪಠ್ಯಕ್ರಮ ಅಳವಡಿಸಿಕೊಂಡು NCP ಶಿಕ್ಷಣ ಒದಗಿಸುತ್ತದೆ. ಆದರೆ, ಸಂಕುಚಿತ ರಾಜಕೀಯ ಮನಸ್ಥಿತಿ ಹೊಂದಿದ ರಾಜ್ಯದ ಸರ್ಕಾರದ ನಾಯಕರಿಂದ ರಾಜ್ಯದ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುವ ಧೋರಣೆ ಹೊಂದಿರುವುದು ಖಂಡನೀಯ. ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತರುವ ಯೋಜನೆಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ NCP ರದ್ದು ಮಾಡುತ್ತಿರುವ ವಿರುದ್ಧ ಧ್ವನಿ ಎತ್ತಬೇಕು ಎಂದರು.