ಇಂದಿನಿಂದ ಜಿ-20 ಶೃಂಗಸಭೆ

ಭಾನುವಾರ, 9 ಜುಲೈ 2023 (09:36 IST)
ಬಳ್ಳಾರಿ : ವಿಶ್ವ ವಿಖ್ಯಾತ ಹಂಪಿಯಲ್ಲಿ ಇದೇ ಮೊದಲ ಬಾರಿಗೆ ಜಿ-20 ಶೃಂಗಸಭೆ ನಡೆಯುತ್ತಿದೆ. ಜುಲೈ 9ರಿಂದ 16 ರವರೆಗೆ ನಡೆಯಲಿರುವ ಜಿ-20 ಶೃಂಗಸಭೆಗೆ ಹಂಪಿ ನವವಧುವಿನಂತೆ ಶೃಂಗಾರಗೊಂಡಿದೆ.

ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ಜಿ-20 ಸಲುವಾಗಿ ಹಂಪಿಯಲ್ಲಿ ಕೈಗೊಳ್ಳಲಾಗಿದೆ.
ಜಿ-20 ಶೃಂಗಸಭೆಗೆ ಈ ಬಾರಿಯ ಅಧ್ಯಕ್ಷೀಯ ರಾಷ್ಟ್ರ ಭಾರತವಾಗಿದೆ. ಅದಕ್ಕಾಗಿಯೇ ಅತಿ ಮುಖ್ಯವಾದ ಜಿ-20 ಶೃಂಗಸಭೆಯ 3ನೇ ಪ್ರಮುಖ ಸಭೆ ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಇಂದಿನಿಂದ 16 ರವರೆಗೆ ನಡೆಯಲಿದೆ. 3 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ 3 ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಹಲವಾರು ಉನ್ನತ ಸಭೆಗಳು ಹಂಪಿಯಲ್ಲಿ ನಡೆಯಲಿದೆ.

ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಹಂಪಿ ಪ್ರದೇಶದ ಸುತ್ತಮುತ್ತಲಿನ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದೆ. ಸ್ಮಾರಕಗಳ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ. 43 ರಾಷ್ಟ್ರಗಳ 20 ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಲಿರುವುದರಿಂದ ಹಂಪಿಯ ಸುತ್ತಮುತ್ತ ಎಲ್ಲೆಡೆ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ