ಜಮೀರ್ ಅಹ್ಮದ್ ವಿರುದ್ಧ ಜಿ.ಎ.ಬಾವ ಕಣಕ್ಕೆ?

ಸೋಮವಾರ, 26 ಡಿಸೆಂಬರ್ 2016 (09:35 IST)
ಕಾಂಗ್ರೆಸ್ ನಾಯಕ ಜಿ.ಎ.ಬಾವ ಅವರು ಜೆಡಿಎಸ್ ಪಕ್ಷ ಸೇರಲು ಒಲವು ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಜಮೀರ್ ಅಹ್ಮದ್ ನಡುವೆ ವಿರಸ ಉಂಟಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಜಿ.ಎ.ಬಾವ ಅವರು ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಅವರಿಗೆ ಶೆಡ್ಡು ಹೊಡೆಯಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
 
ಜೆಡಿಎಸ್ ಪಕ್ಷ ಸೇರುವ ಕುರಿತು ಕಾಂಗ್ರೆಸ್ ನಾಯಕ ಜಿ.ಎ.ಬಾವ ಅವರು ಎಚ್‌.ಡಿ.ಕುಮಾರಸ್ವಾಮಿ ಅವರ ಜೊತೆ ದೂರವಾಣಿ ಮೂಲಕ ಚರ್ಚಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. 
 
ಜೆಡಿಎಸ್ ಪಕ್ಷದಿಂದ ಅಮಾನತಾಗಿರುವ ಜಮೀರ್ ಅಹ್ಮದ್ ಕ್ಷೇತ್ರದಿಂದ ಸ್ಪರ್ಥಿಸಲು ಜೆಡಿಎಸ್ ಪರ್ಯಾಯ ಅಭ್ಯರ್ಥಿಯನ್ನು ಹುಡುಕುತ್ತಿದೆ. 
 
ಜೆಡಿಎಸ್‌ ಪಕ್ಷದ ಬಂಡಾಯ ಶಾಸಕರಾದ ಜಮೀರ್ ಅಹ್ಮದ್, ಶ್ರೀನಿವಾಸ್, ಚೆಲುವರಾಯ ಸ್ವಾಮಿ, ಬಾಲಕೃಷ್ಣ ಮತ್ತು ಇಕ್ಬಾಲ್ ಅನ್ಸಾರಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೂರನೇಯ ಅಭ್ಯರ್ಥಿ ಬೆಂಬಲಿಸಿದ್ದ ಹಿನ್ನೆಲೆಯಲ್ಲಿ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದರು.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ