ಗೃಹ ಸಚಿವರಾಗಿ ಜಿ.ಪರಮೇಶ್ವರ್ ಮುಂದುವರಿಕೆ: ಸಿಎಂ

ಸೋಮವಾರ, 5 ಜೂನ್ 2017 (13:26 IST)
ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜಿ.ಪರಮೇಶ್ವರ್, ಜೂನ್ 16 ರವರೆಗೆ ಸಚಿವ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಮುಂಬರುವ ಜೂನ್ 16 ರವರೆಗೆ ವಿಧಾನಸಭೆ ಅಧಿವೇಶನ ನಡೆಯಲಿರುವುದರಿಂದ ಸಚಿವ ಸ್ಥಾನದಲ್ಲಿ ಮತ್ತು ವಿಧಾನಪರಿಷತ್‌ನ ಸಭಾನಾಯಕರಾಗಿ ಮುಂದುವರಿಯುವಂತೆ ಪರಮೇಶ್ವರ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಹೈಕಮಾಂಡ್ ಘೋಷಿಸಿದ ಹಿನ್ನೆಲೆಯಲ್ಲಿ ಜಿ.ಪರಮೇಶ್ವರ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
 
ವಿಧಾನಸಭೆ ಅಧಿವೇಶನ ಮುಕ್ತಾಯಗೊಳ್ಳುವವರೆಗೆ ಜಿ. ಪರಮೇಶ್ವರ್ ಸಚಿವ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಪಕ್ಷದ ಅಧಿಕೃತ ಮೂಲಗಳು ತಿಳಿಸಿವೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್ಆಡಿ 2.5 ಲಕ್ಷ ರೂಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿಭಾಗವಹಿಸಲು  ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ