ಸಿದ್ದರಾಮಯ್ಯ ಕಾರ್ಯನಿರ್ವಹಣೆ ಸರಿಯಿಲ್ಲ: ಹೈಕಮಾಂಡ್‌ಗೆ ಜಿ ಪರಮೇಶ್ವರ್ ಆಪ್ತರ ದೂರು

ಭಾನುವಾರ, 30 ಆಗಸ್ಟ್ 2015 (11:10 IST)
ಬಿಬಿಎಂಪಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದ ವಿರುದ್ಧ ಹೈಕಮಾಂಡ್‌ಗೆ ದೂರು ಸಲ್ಲಿಸಲಾಗಿದೆ.
  
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯನಿರ್ವಹಣೆ ಸರಿಯಾಗಿಲ್ಲ. ಜೆಡಿಎಸ್‌ನೊಂದಿಗಿನ ಮೈತ್ರಿಯಿಂದ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಇಮೇಜ್‌ಗೆ ಧಕ್ಕೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರ ಆಪ್ತರು ದೂರು ನೀಡಿದ್ದಾರೆ ಎನ್ನಲಾಗಿದೆ. 
 
ಜೆಡಿಎಸ್‌ ಪಕ್ಷದೊಂದಿಗೆ ಯಾವುದೇ ಕಾರಣಕ್ಕೂ ಮೈತ್ರಿಗೆ ಅನುಮತಿ ನೀಡಬೇಡಿ ಎಂದು ಭಿನ್ನಮತಿಯರು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
  
ನಿನ್ನೆ ಸಂಜೆ ಕಾಂಗ್ರೆಸ್- ಜೆಡಿಎಸ್ ಮೈತ್ರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ವರದಿಗಳು ಸಿಎಂ ಸಿದ್ದರಾಮಯ್ಯ ಮತ್ತು ಜೆಡಿಎಸ್ ಪಾಳಯದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ.
 

ವೆಬ್ದುನಿಯಾವನ್ನು ಓದಿ