ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರು ತಪ್ಪು ತಿದ್ದಿಕೊಳ್ಳದಿದ್ದರೆ ರಾಷ್ಟ್ರಪತಿಗಳಿಗೆ ದೂರು ಕೊಡಬೇಕಾಗುತ್ತದೆ ಎಂದು ಗೃಹಸಚಿವ ಜಿ ಪರಮೇಶ್ವರ್ ಎಚ್ಚರಿಸಿದ್ದಾರೆ.
ಇಂದು ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ರಾಜಭವನ ಚಲೋ ಪಾದಯಾತ್ರೆ ನಡೆಸಿದ್ದರು. ಈ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇಂದಿನ ರಾಜಭವನ ಚಲೋ ಹೋರಾಟದಲ್ಲಿ ಕಾಂಗ್ರೆಸ್ ನ ಹೆಚ್ಚಿನ ನಾಯಕರು ಭಾಗಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರಿಗೆ ಅವರು ಮಾಡಿರುವುದು ತಪ್ಪು ಎಂದು ಮನವರಿಕೆ ಮಾಡಿಕೊಡಲಿದ್ದೇವೆ. ಮುಡಾ ವಿಚಾರದಲ್ಲಿ ಸಿದ್ದರಾಮಯ್ಯನವರದ್ದು ಯಾವುದೇ ತಪ್ಪಿಲ್ಲ. ಹಾಗಿದ್ದರೂ ತಪ್ಪು ತಿಳುವಳಿಕೆಯಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿಸಿದ್ದಾರೆ.
ಒಂದು ವೇಳೆ ಅವರು ತಪ್ಪು ತಿದ್ದಿಕೊಳ್ಳದೇ ಇದ್ದಲ್ಲಿ ನಾವು ನೇರವಾಗಿ ರಾಷ್ಟ್ರಪತಿಗಳ ಬಳಿಗೆ ಹೋಗಬೇಕಾಗುತ್ತದೆ. ಕ್ಯಾಬಿನೆಟ್ ನಿರ್ಧಾರವನ್ನು ರಾಜ್ಯಪಾಲರು ಪ್ರಶ್ನಿಸಲಾಗದು. ಸರ್ಕಾರಕ್ಕೆ ಆ ಅವಕಾಶವಿದೆ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ.