ಇಡಿ ದಾಳಿ ನಡೆಯುತ್ತಿರುವಾಗಲೇ ಸಿಎಂ ಅನ್ನು ಭೇಟಿಯಾದ ಜಿ ಪರಮೇಶ್ವರ್
ಚಿನ್ನ ಕಳ್ಳ ಸಾಗಣೆ ಆರೋಪಿ, ನಟಿ ರನ್ಯಾರಾವ್ ಖಾತೆಗೆ ಹವಾಲಾ ಹಣ ವರ್ಗಾವಣೆ ಮಾಡಿದವರನ್ನು ಗುರಿಯಾಗಿಸಿಕೊಂಡು ED ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ರಾಜ್ಯದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಇದರಲ್ಲಿ ಪರಮೇಶ್ವರ ಅವರಿಗೆ ಸಂಬಂಧಿಸಿದ ಮೂರು ಶಿಕ್ಷಣ ಸಂಸ್ಥೆಗಳೂ ಸೇರಿವೆ.
ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಸೇರಿದಂತೆ ಮೂರು ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಕ್ಕೆ ED ಅಧಿಕಾರಿಗಳು ಭೇಟಿ ನೀಡಿ ಕಳೆದ ಐದು ವರ್ಷಗಳ ಆರ್ಥಿಕ ದಾಖಲೆಗಳನ್ನು ಕೋರಿದ್ದಾರೆ ಎಂದು ಪರಮೇಶ್ವರ ಹೇಳಿದ್ದಾರೆ.