ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದಲ್ಲಿ ವಿರೋಧಿಗಳು ಸೋಲಿಸಬಹುದು ಎನ್ನುವ ಆತಂಕದಿಂದ ಚುನಾವಣೆಗೆ ಸ್ಪರ್ಧಿಸದಿರಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೊಣೆಯನ್ನು ಹೊತ್ತುಕೊಂಡು ಚುನಾವಣೆಯಲ್ಲಿ ಸಂಪೂರ್ಣವಾಗಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಕೊಂಡಲ್ಲಿ ಮುಂದೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಬಹುದು ಎನ್ನುವ ದೂರಾಲೋಚನೆಯಲ್ಲಿದ್ದಾರೆ ಎನ್ನಲಾಗಿದೆ.
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದ ಪರವಾಗಿ ಪ್ರಚಾರ ನಡೆಸುತ್ತೇನೆ ಎಂದು ಪಕ್ಷದ ಹೈಕಮಾಂಡ್ ಮುಂದೆ ತಮ್ಮ ಚುನಾವಣಾ ರಣತಂತ್ರ ವಿವರಿಸಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಬಾರಿ ಚುನಾವಣೆಯಲ್ಲಿ ಸೋಲನುಭವಿಸಿದ್ದರಿಂದ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿ ಹೋಗಿರುವುದನ್ನು ಪರಮೇಶ್ವರ್ ಮರೆತಿಲ್ಲ. ಮತ್ತೆ ಇತಿಹಾಸ ಮರುಕಳಿಸಬಾರದು ಎನ್ನುವ ಹಿನ್ನೆಲೆಯಲ್ಲಿ ತಮ್ಮ ಆಪ್ತರೊಂದಿಗೆ ರಹಸ್ಯ ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ಪರಮೇಶ್ವರ್ ಆಪ್ತ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.