ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಪರಮೇಶ್ವರ್
‘ಸಿದ್ದರಾಮಯ್ಯ ನಮ್ಮ ಸಮನ್ವಯ ಸಮಿತಿ ಅಧ್ಯಕ್ಷರು. ಅವರಿಗೆ ತಮ್ಮ ಜವಾಬ್ಧಾರಿ ಗೊತ್ತಿದೆ. ಅವರು ಏನೋ ಹೇಳಿದರೆ ಅದನ್ನು ಇನ್ಯಾರೋ ಬೇರೆ ರೀತಿ ತಿರುಚಿದ್ದಾರೆ’ ಎಂದು ಪರಮೇಶ್ವರ್ ಸಮಜಾಯಿಷಿ ನೀಡಿದ್ದಾರೆ.
ಅಷ್ಟೇ ಅಲ್ಲದೆ, ಜೂನ್ 30 ರಂದು ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಆಗ ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.