ಸಿದ್ದರಾಮಯ್ಯ, ಖರ್ಗೆಗೆ ಟಾಂಗ್ ನೀಡಲು ಪರಮೇಶ್ವರ್ ರಣತಂತ್ರ

ಬುಧವಾರ, 19 ಅಕ್ಟೋಬರ್ 2016 (16:02 IST)
ಮುಂಬರುವ ವಿಧಾನಸಭೆ ಚುನಾವಣೆಯನ್ನು ದಲಿತ ನಾಯಕರ ನೇತೃತ್ವದಲ್ಲಿ ನಡೆಸಲು ಚಿಂತಿಸುತ್ತಿರುವ ಡಾ.ಜಿ.ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ಹಾಗೂ ಲೋಕಸಭೆ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಟಾಂಗ್ ನೀಡಲು ಮುಂದಾಗಿದ್ದಾರೆ. 
 
ಅಕ್ಟೋಬರ್ 27 ರಂದು ಡಾ.ಜಿ.ಪರಮೇಶ್ವರ್ ಸಾಧನಾ ಸಮಾವೇಶ ನಡೆಸಲು ಯೋಚಿಸುತ್ತಿದ್ದು, ಸಮಾವೇಶಕ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಸಾಧನಾ ಸಮಾವೇಶಕ್ಕೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಹ್ವಾನ ನೀಡುವ ಮೂಲಕ ಡಾ.ಜಿ.ಪರಮೇಶ್ವರ್ ಮೂರನೇಯ ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಲು ಲಾಬಿ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
 
ಕಳೆದ ಬಾರಿ ತಮ್ಮ ನೇತೃತ್ವದಲ್ಲಿಯೇ ವಿಧಾನಸಭೆಗೆ ಚುನಾವಣೆ ನಡೆದು ಪಕ್ಷ ಅಧಿಕಾರಕ್ಕೆ ಬಂದಿದ್ದರೂ ಮುಖ್ಯಮಂತ್ರಿಯಾಗುವ ಯೋಗ ಕೂಡಿ ಬಂದಿರಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿನ ಸೋಲಿನಿಂದಾಗಿ ಸಿಎಂ ಖುರ್ಚಿ ಸ್ವಲ್ಪದರಲ್ಲಿಯೇ ತಪ್ಪಿ ಹೋಗಿತ್ತು..
 
ಆದರೆ, ಈ ಬಾರಿ ಹಿಟ್ ಆರ್ ಗೆಟ್ ಮುಖ್ಯಮಂತ್ರಿಯಾಗಲೇ ಬೇಕು ಎಂದು ನಿರ್ಧರಿಸಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ತಮ್ಮ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿ ಎನ್ನುವ ಉದ್ದೇಶದಿಂದ ಮೂರನೇ ಬಾರಿಗೆ ಕೆಪಿಸಿಸಿ ಅಧ್ಯಕ್ಷ್ಯರಾಗುವ ರಣತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ