ಯುವತಿಯನ್ನು ಅಪಹರಿಸಿ ಅತ್ಯಾಚಾರ

ಬುಧವಾರ, 1 ಅಕ್ಟೋಬರ್ 2014 (08:38 IST)
24 ವರ್ಷದ ಯುವತಿಯೋರ್ವಳನ್ನು ಅಪಹರಿಸಿ ಅತ್ಯಾಚಾರ ನಡೆಸಿದ ಘಟನೆ ಗದಗ್ ಜಿಲ್ಲೆಯಲ್ಲಿ ನಡೆದಿದೆ.
 
ಮುಂಡರಗಿ ತಾಲ್ಲೂಕಿನ ಬಿದರಳ್ಳಿ ಎಂಬ ಗ್ರಾಮದಲ್ಲಿ ಸೆಪ್ಟಂಬರ್ 26 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಅದೇ ಗ್ರಾಮದ ಬಿದ್ಯಾಡಪ್ಪ ( 35) ಎಂದು ಗುರುತಿಸಲಾಗಿದೆ. 
 
ಕಳೆದ  ತಿಂಗಳ 26 ರಂದು ಪೀಡಿತೆಯನ್ನು ಅಪಹರಿಸಿ ಈ ಕೃತ್ಯ ಎಸಗಲಾಗಿದೆ ಎಂದು ವರದಿಯಾಗಿದೆ. ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಾರಿಯಾಗಿರುವ ಆರೋಪಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ.  
 
ಬಲಿಪಶು ಯುವತಿಯನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.  

ವೆಬ್ದುನಿಯಾವನ್ನು ಓದಿ