ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ ಗಡ್ಕರಿ
ಹಾಗಾಗಿ ಈ ಬಗ್ಗೆ ಇಂದು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಭಾಗಶಃ ಪೂರ್ಣ ಹಿನ್ನೆಲೆ ಇಂದು ನಿತಿನ್ ಗಡ್ಕರಿ ಹೆದ್ದಾರಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ-ಶ್ರೀರಂಗಪಟ್ಟಣದವರೆಗೆ ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಈ ವೇಳೆ ನಿತಿನ್ ಗಡ್ಕರಿಗೆ ಸಂಸದ ಬಿ.ಎನ್.ಬಚ್ಚೇಗೌಡ, ಸಚಿವರಾದ ಸಿ.ಸಿ ಪಾಟೀಲ್ ಸೇರಿದಂತೆ ಕೆಲ ಸಚಿವರು ಸಾಥ್ ನೀಡಿದ್ದಾರೆ.