ದೇಶದ ಅತಿ ಉದ್ದದ ಸಿಗಂದೂರು ಸೇತುವೆ ಲೋಕಾರ್ಪಣೆ, ಶಿಷ್ಟಾಚಾರ ಉಲ್ಲಂಘನೆ ಎಂದ ಸಿಎಂಗೆ ಗಡ್ಕರಿ ಪ್ರತಿಕ್ರಿಯೆ

Sampriya

ಸೋಮವಾರ, 14 ಜುಲೈ 2025 (16:25 IST)
Photo Credit X
ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಸಾಗರದ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ 2ನೇ ಅತಿ ಉದ್ದದ ಕೇಬಲ್ ಸೇತುವೆಯಾದ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆ ಮಾಡಿದರು.

ಸೇತುವೆ ಲೋಕಾರ್ಪಣೆ ವೇಳೆ ನಡೆದ ಹೋಮದಲ್ಲಿ ಸಚಿವರು ಪಾಲ್ಗೊಂಡರು. ಲೋಕಾರ್ಪಣೆ ನಂತರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. 

ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಕೇಂದ್ರ ಸರ್ಕಾರ ಶಿಷ್ಟಾಚಾರವನ್ನು ಉಲ್ಲಂಘನೆ ಮಾಡಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದರು. ಈ ಆರೋಪ ಸಂಬಂಧ ನಿತಿನ್ ಗಡ್ಕರಿ ಇದೀಗ ಪ್ರತಿಕ್ರಿಯಿಸಿದ್ದಾರೆ. 

ಖುದ್ದು ಹಾಜರಾಗಲು ಸಾಧ್ಯವಾಗದಿದ್ದಲ್ಲಿ ವಿಡಿಯೊ ಕಾನ್ಫೆರೆನ್ಸ್‌ ಮೂಲಕ ಭಾಗಿಯಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿನಂತಿಸಲಾಗಿತ್ತು ಎಂದಿದ್ದಾರೆ.

ಸೇತುವೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜುಲೈ 11ರಂದು ಅಧಿಕೃತ ಆಹ್ವಾನ ನೀಡಲಾಗಿತ್ತು. ಖುದ್ದು ಹಾಜರಾಗಲು ಸಾಧ್ಯವಾಗದಿದ್ದಲ್ಲಿ ವರ್ಚುವಲ್‌ ಆಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಜುಲೈ 12ರಂದು ಕಳುಹಿಸಿದ ಪತ್ರದಲ್ಲಿ ತಿಳಿಸಲಾಗಿತ್ತು ಎಂದು ಗಡ್ಕರಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ