ಕಾಮುಕರಿಗೆ ಗಲ್ಲು ಫಿಕ್ಸ್ - ನಿರ್ಭಯಾ ಅತ್ಯಾಚಾರಿಗಳ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

ಶುಕ್ರವಾರ, 17 ಜನವರಿ 2020 (15:09 IST)
ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿಯ ಕ್ಷಮಾಪಣ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ. ಈ ಮೂಲಕ ನಾಲ್ವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಆಗಿದೆ.
 


2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರಿಗೆ ಮರಣ ದಂಡನೆ ಶಿಕ್ಷೆಯಾಗಿದ್ದು, ಇದರಲ್ಲಿ ಒಬ್ಬನಾದ ಮುಖೇಶ್ ಸಿಂಗ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. ಈ ಕ್ಷಮಾಪಣ ಅರ್ಜಿಯನ್ನು ರಾಷ್ಟ್ರಪತಿಗಳು ತಿರಸ್ಕರಿಸಿದ್ದಾರೆ.

ದೆಹಲಿ ಸರ್ಕಾರ ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸ್ಸು ಮಾಡಿದ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಮುಖೇಶ್ ಕ್ಷಮಾದಾನ ಅರ್ಜಿಯನ್ನು  ಗೃಹ ಸಚಿವಾಲಯಕ್ಕೆ ಕಳುಹಿಸಿದ್ದರು. ಆದರೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಈ ಮೂಲಕ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ.

ನಾಲ್ವರು ಅಪರಾಧಿಗಳಾದ ಮುಖೇಶ್ ಸಿಂಗ್ , ವಿನಯ್ ಶರ್ಮಾ, ಅಕ್ಷಯ್ ಕುಮಾರ್ ಸಿಂಗ್ ಮತ್ತು ಪವನ್ ಗುಪ್ತಾ ಎಂಬ ನಾಲ್ವರು ಆರೋಪಿಗಳನ್ನು ಜನೇವರಿ 22 ರಂದು ಗಲ್ಲಿಗೇರಿಸಬೇಕಿತ್ತು. ಆದರೆ ಮುಖೇಶ್ ಕ್ಷಮಾದಾನ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ನಿಗದಿತ ದಿನಾಂಕದಂದು ಗಲ್ಲಿಗೇರಿಸಲಾಗುವುದಿಲ್ಲ ಎಂದು ದೆಹಲಿ ಸರ್ಕಾರ ತಿಳಿಸಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ