ಗಣಪತಿ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ಅಳಿಸಿಹಾಕಿರುವ ಆರೋಪ ಸುಳ್ಳು: ಸಿಎಂ

ಭಾನುವಾರ, 27 ಆಗಸ್ಟ್ 2017 (16:07 IST)
ದಿವಂಗತ ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಲಾಗಿದೆ ಎನ್ನುವ ಬಿಜೆಪಿ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ರಾಜ್ಯ ಅಧ್ಯಕ್ಷ ಯಡಿಯೂರಪ್ಪ ಅವರು ಸತ್ಯವನ್ನು ಎಂದಿಗೂ ಮಾತನಾಡುವುದಿಲ್ಲ. ಅವರು ಯಾವಾಗಲೂ ಸುಳ್ಳು ಹೇಳುತ್ತಾರೆ. ಯಡಿಯೂರಪ್ಪ ಅವರ ಪ್ರತಿಯೊಂದು ಹೇಳಿಕೆಗೆ ನಾನು ಪ್ರತ್ಯುತ್ತರ ನೀಡಬಹುದೇ? ಎಂದು ಪ್ರಶ್ನಿಸಿದರು
 
ಸಾಕ್ಷ್ಯಗಳನ್ನು ಅಳಿಸಿಹಾಕಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತುಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎನ್ನುವ ಯಡಿಯೂರಪ್ಪ ಪ್ರತಿಕ್ರಿಯೆಗೆ ತಿರುಗೇಟು ನೀಡಿದ ಅವರು ಯಾವತ್ತೂ ಯಡಿಯೂರಪ್ಪ ನಿಜ ಹೇಳಿದ್ದಾರೆ ಎಂದು ತಿರುಗೇಟು ನೀಡಿದರು.
 
ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗೆ ಹಸ್ತಾಂತರಿಸಬೇಕೆಂದು ಬಿಜೆಪಿಯ ಬೇಡಿಕೆಗೆ ಉತ್ತರಿಸಿದ ಅವರು, ಸಿಐಡಿ ಈಗಾಗಲೇ ಈ ಪ್ರಕರಣದಲ್ಲಿ ವರದಿಯನ್ನು ಸಲ್ಲಿಸಿದೆ. ಕೆಲವು ಜನರು ಸಿಐಡಿ ವರದಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವಾಗ ಸಿಬಿಐ ತನಿಖೆಗೆ ಒತ್ತಾಯಿಸಬಹುದೇ? "ಎಂದು ಗುಡುಗಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ