ಗಣಪತಿ ಕೇಸ್ ಸಿಬಿಐಗೆ ವಹಿಸ್ಬೇಕು, ಸಿಎಂ ರಾಜೀನಾಮೆ ನೀಡ್ಬೇಕು: ಬಿಎಸ್‌ವೈ

ಗುರುವಾರ, 24 ಆಗಸ್ಟ್ 2017 (13:23 IST)
ದಿವಂಗತ ಡಿವೈಎಸ್‌ಪಿ ಗಣಪತಿ ಪ್ರಕರಣದಲ್ಲಿ ಸಾಕ್ಷ್ಯಗಳ ನಾಶ ಕುರಿತಂತೆ ಬಹಿರಂಗವಾಗಿದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಪತಿಯವರ ಸಾವಿನ ತನಿಖೆಯನ್ನು ತರಾತುರಿಯಲ್ಲಿ ಮುಗಿಸಲಾಗಿದೆ. ಸಾಕ್ಷ್ಯ ನಾಶ ಕುರಿತಂತೆ ಸರಕಾರ ಉತ್ತರ ನೀಡಬೇಕಾಗಿದೆ ಎಂದು ಗುಡುಗಿದ್ದಾರೆ.
 
ಪ್ರಕರಣದ ಸತ್ಯಾಂಶ ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು. ಪ್ರಕರಣದಲ್ಲಿ ಎಸಿಬಿ, ಸಿಐಡಿ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಎಸಿಬಿ ಮತ್ತು ಸಿಐಡಿ ಅಧಿಕಾರಿಗಳು ಅವಸರದಲ್ಲಿಯೇ ಸಚಿವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದರು.
 
ಗಣಪತಿ ಸಾವಿನ ಪ್ರಕರಣವನ್ನು ಮುಚ್ಚಿಹಾಕಲು ಸರಕಾರ ವ್ಯವಸ್ಥಿತ ಸಂಚು ನಡೆಸಿದೆ. ಪ್ರಮುಖ ಆರೋಪಿಗಳನ್ನು ರಕ್ಷಿಸಲು ಸಾಕ್ಷ್ಯನಾಶ ಮಾಡಲಾಗಿದೆ. ಗಣಪತಿ ಸಾವಿನಲ್ಲಿ ಕೆಂಪಯ್ಯ ಪಾತ್ರ ಕಂಡುಬರುತ್ತಿದೆ. ಪ್ರಕರಣವನ್ನು ಸಂಪೂರ್ಣ ಮುಚ್ಚಿಹಾಕಲು ಸರಕಾರ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ