ಗಣಪತಿ ಆತ್ಮಹತ್ಯೆ: ಪ್ರಸಾದ್, ಮೊಹಾಂತಿ ಮನವಿ ತಳ್ಳಿಹಾಕಿದ ಕೋರ್ಟ್

ಮಂಗಳವಾರ, 19 ಜುಲೈ 2016 (16:42 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿದ್ದು ಸರದಿ ಪ್ರಕಾರವೇ ವಿಚಾರಣೆ ನಡೆಸುವುದಾಗಿ ಆದೇಶ ನೀಡಿದೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಐಪಿಎಸ್ ಅಧಿಕಾರಿಗಳಾದ ಎಂ.ಎಂ.ಪ್ರಸಾದ್ ಹಾಗೂ ಮೊಹಾಂತಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.
 
ವಕೀಲರ ಸಂಘದ ಅಧ್ಯಕ್ಷರಾಗಿರುವ ಶಿವರಾಮ್ ಅವರು ಸರದಿಯಂತೆಯೇ ಪ್ರಕರಣವನ್ನು ತನಿಖೆ ನಡೆಸಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಸರದಿ ಪ್ರಕಾರವೇ ವಿಚಾರಣೆ ನಡೆಸುವುದಾಗಿ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ