ಗಣಪತಿ ಆತ್ಮಹತ್ಯೆ ಪ್ರಕರಣ ಮುಚ್ಚಿಹಾಕುವ ಹುನ್ನಾರ:ಬೋಪಯ್ಯ

ಮಂಗಳವಾರ, 12 ಜುಲೈ 2016 (14:15 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆಸುತ್ತಿದೆ ಎಂದು ಕೆ.ಜಿ.ಬೋಪಯ್ಯ ಆರೋಪಿಸಿದ್ದಾರೆ.
 
ವಿಧಾನಸಭೆಯಲ್ಲಿ ಮಾತನಾಡಿದ ಕೆ.ಜಿ.ಬೋಪಯ್ಯ, ನಮ್ಮ ಜಿಲ್ಲೆಯ ಪ್ರಾಮಾಣಿಕ ಅಧಿಕಾರಿಯನ್ನು ಕಳೆದುಕೊಂಡು ನೋವಾಗಿದೆ. ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಮುಚ್ಚಿಹಾಕುವ ಹುನ್ನಾರ ನಡೆಸುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
 
ಡಿವೈಎಸ್‌ಪಿ ಗಣಪತಿ ಅವರು 2016 ರಿಂದ ಮಂಗಳೂರಿನ ಐಜಿ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಜುಲೈ 2 ರಂದು ಮಂಗಳೂರಿನಿಂದ ಮಡಿಕೇರಿಗೆ ಬರುವಾಗ ಆತ್ಮಹತ್ಯೆಗೆ ಶರಣಾಗಬೇಕು ಎಂದು ನಿರ್ಧಾರ ಮಾಡಿಕೊಂಡು ಬಂದಿದ್ದರು. ಮಾರ್ಗ ಮಧ್ಯದಲ್ಲಿ ಲಾಡ್ಜ್‌ನಲ್ಲಿ ಆಶ್ರಯ ಪಡೆದುಕೊಂಡು, ತನಗೆ ಆಗುತ್ತಿರುವ ಕಿರುಕುಳದ ಕುರಿತು ಖಾಸಗಿ ಸುದ್ದಿವಾಹಿನಿ ಮುಂದೆ ಹೇಳಿಕೊಂಡಿದ್ದರು. ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಮೂವರು ಅಧಿಕಾರಿಗಳ ಹೆಸರನ್ನು ಪ್ರಸ್ತಾಪಿಸಿದ್ದರು ಎಂದು ಕೆ.ಜಿ.ಬೋಪಯ್ಯ ಹೇಳಿದ್ದಾರೆ.
 
ಎಂ.ಕೆ. ಗಣಹತಿ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಮುಚ್ಚಿಹಾಕುವ ಹುನ್ನಾರ ನಡೆಸುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ