ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆ ಪುನಾರಂಭ

ಶುಕ್ರವಾರ, 5 ಆಗಸ್ಟ್ 2016 (11:47 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸೂಚನೆ ಮೇರೆಗೆ ಇಂದಿನಿಂದ ಮತ್ತೆ ಸಿಐಡಿ ತನಿಖೆ ಪ್ರಾರಂಭಗೊಂಡಿದೆ.
 
ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಇಂದು ಸಿಐಡಿ ಅಧಿಕಾರಿಗಳು ಮಡಿಕೇರಿಗೆ ಭೇಟಿ ನೀಡಿ ತನಿಖೆ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
 
ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಿರಿಯ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ಅವರು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಶರಣಾಗಿದ್ದರು.
 
ಮಡಿಕೇರಿ ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ