ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಐಡಿ ಅಧಿಕಾರಿಗಳ ತನಿಖೆಯ ಮೇಲೆ ನಂಬಿಕೆ ಇದೆ. ಆದರೆ, ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ದೃಷ್ಟಿಯಿಂದ ನ್ಯಾಯಾಂಗ ತನಿಖೆಗೆ ನೀಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.